ಬೆಂಗಳೂರು, ಏಪ್ರಿಲ್ 25, 2021 (www.justkannada.in): ಬಡವರ ವಿರೋಧಿ ಬಿಜೆಪಿ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರು, ಈಗ ಪ್ರಧಾನಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ ಎಂದು ಟೀಕಿಸಿದ್ದಾರೆ.
ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿಯವರು ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ ಎಂದಿದ್ದಾರೆ.