ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು: ಪರಿಹಾರಕ್ಕೆ ಆಗ್ರಹ.

ಮೈಸೂರು,ಜೂನ್,12,2024 (www.justkannada.in): ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿಪುರ ಗ್ರಾಮದಲ್ಲಿ ನಡೆದಿದೆ.

ಬಸವಶೆಟ್ಟಿ(60) ಮೃತಪಟ್ಟ ರೈತ. ಹೈ ವೋಲ್ಟೇಜ್ ತಂತಿ ತುಂಡಾಗಿ ಬಿದ್ದು ಈ ಅವಘಡ ಸಂಭವಿಸಿದೆ.  ಜಮೀನಿನಲ್ಲಿ ಹೈ ವೋಲ್ಟೇಜ್ ತಂತಿ ತುಂಡಾಗಿ ಬಿದ್ದಿದ್ದು ಈ ನಡುವೆ ಜಮೀನಿಗೆ ತೆರಳಿದ್ದ ಬಸವಶೆಟ್ಟಿ ಕಾಣದೆ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚೆಸ್ಕಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು  ಸ್ಥಳಕ್ಕೆ ದೊಡ್ಡ ಕವಲಂದೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Key words: Farmer, dies, electric, wire, mysore