ಮೈಸೂರು, ಜೂ.12,2024: (www.justkannada.in news) ಕ.ರಾ.ಮು.ವಿಯಲ್ಲಿ“ಗ್ರಾಮೀಣ ಕರ್ನಾಟಕದಲ್ಲಿ ಪ್ರಧಾನಮಂತ್ರಿ ಉಜ್ವಲ್ ಯೋಜನೆಯ ಸಾಮಾಜಿಕ ಆರ್ಥಿಕ ಮೌಲ್ಯಮಾಪನ: ಬೆಂಗಳೂರು ಜಿಲ್ಲೆಯ ವಿಶೇಷ ಉಲ್ಲೇಖ” ಎಂಬ ಕಿರು ಸಂಶೋಧನಾ ಕಾರ್ಯವನ್ನುನಡೆಸಲಾಗಿದೆ.
ಈ ಅಧ್ಯಯನದಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿಗ್ರಾಮೀಣ ಮಹಿಳೆಯರು ಎದುರಿಸುತ್ತಿರುವ ಕೆಲವು ಪ್ರಮುಖ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಾಮರ್ಶಿಸಲಾಗಿದೆ.
ಕ.ರಾ.ಮು.ವಿ.ಯಲ್ಲಿ“ಸಾಮಾಜಿಕಆರ್ಥಿಕ ಸಮಸ್ಯೆಗಳು ಮತ್ತು ಸವಾಲುಗಳು: ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸುವ ತಂತ್ರಗಳು” ಎಂಬ ರಾಷ್ಟ್ರೀಯ ಮಟ್ಟದ ವೆಬಿನಾರ್ ನಡೆಸಲಾಯಿತು. ಇದು ರಾಷ್ಟ್ರೀಯ ಮಟ್ಟದಲ್ಲಿಸುಮಾರು 70 ಲೇಖಕರಿಗೆ ವೇದಿಕೆಯನ್ನು ಕಲ್ಪಿಸಿತ್ತು. ಈ ರಾಷ್ಟ್ರೀಯ ವೆಬಮಿನಾರ್‍ನಲ್ಲಿ ವಿವಿಧ ವಿಷಯಗಳ ಕುರಿತು ತಜ್ಞರು ತಮ್ಮ ಲೇಖನಗಳನ್ನು ಪ್ರಸ್ತುತಪಡಿಸಿದ್ದಾರೆ.
ಸುಸ್ಥಿರ ಗ್ರಾಮೀಣಅಭಿವೃದ್ಧಿ ಕಾರ್ಯಕ್ರಮಗಳ ನ್ಯೂನ್ಯತೆಗಳು ಸರ್ಕಾರದ ಕಾರ್ಯಕ್ರಮಗಳ ಮೂಲಕ ಸುಸ್ಥಿರ ಗ್ರಾಮೀಣಾಭಿವೃದ್ಧಿಕುರಿತ ಸಮಸ್ಯೆಗಳನ್ನು ರಾಷ್ಟ್ರೀಯ ಜರ್ನಲ್‍ನಲ್ಲಿ ಪ್ರಕಟಿಸಲಾಗಿದೆ.
ಸುಸ್ಥಿರ ಅಭಿವೃದ್ಧಿ ಮತ್ತು ಸಂಶೋಧನೆ : ತೃತೀಯ ಲಿಂಗ ಅಭ್ಯರ್ಥಿಗಳಿಗೆ ʼಉಚಿತʼ ಉನ್ನತ ಶಿಕ್ಷಣ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸುಸ್ಥಿರ ಅಭಿವೃದ್ಧಿ ಗುರಿಗಳ ಪ್ರಕಾರ ವಿಶ್ವವಿದ್ಯಾನಿಲಯವು ಒಳಗೊಳ್ಳುವಿಕೆ ಮತ್ತು ಸಮಾನ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ವಿಶ್ವವಿದ್ಯಾನಿಲಯವು ಶಿಕ್ಷಣಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ವೇದಿಕೆ ನೀಡುವ ಮೂಲಕ ಎಲ್ಲರಿಗೂ ಜೀವಮಾನದ ಕಲಿಕೆಯ ಅವಕಾಶಗಳನ್ನು ಕಲ್ಪಿಸಿ ಉನ್ನತ ಶಿಕ್ಷಣವನ್ನು ಪಡೆಯಲು ಉತ್ತೇಜಿಸುತ್ತಿದೆ. ಬಡತನ ರೇಖೆಗಿಂತ ಕೆಳಗಿನ ಮಹಿಳೆಯರಿಗೆ ರಿಯಾಯಿತಿ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ ಉಚಿತ ಉನ್ನತ ಶಿಕ್ಷಣವನ್ನು ಮತ್ತುಇತರೆ ಹಿಂದುಳಿದವರಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಮತ್ತು ಇತರ ಕಾರ್ಯಕ್ರಮಗಳಿಂದ ಎಲ್ಲಾ ಮಹಿಳೆಯರು ಮತ್ತು ಯುವತಿಯರನ್ನು ಸಬಲೀಕರಣಗೊಳಿಸುತ್ತಿದೆ ಹಾಗೂ ವಿಶ್ವವಿದ್ಯಾನಿಲಯದ ಆವರಣದಲ್ಲಿಕುಡಿಯುವ ನೀರು ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಕ್ರಮ ವಹಿಸಿದೆ.
ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿ ವಿದ್ಯುತ್ ಶಕ್ತಿಯ ಬಳಕೆಗಾಗಿ ಸೌರಫಲಕಗಳನ್ನು ಅಳವಡಿಸಿಕೊಂಡಿದೆ. ಕ.ರಾ.ಮು.ವಿ.ಯು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ನಿರಂತರವಾಗಿ ಇತರೆ ಪ್ರಯತ್ನಗಳನ್ನು ಮಾಡುತ್ತಿದೆ.
- ಡಾ. ಜೆ.ಎಸ್. ಚಂದ್ರಶೇಖರ್ , ಸಹಾಯಕ ಪ್ರಾಧ್ಯಾಪಕರು, ಪರಿಸರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಕರಾಮುವಿ, ಮೈಸೂರು.
Key words: Sustainable Development and Research, ‘Free’ higher education, for transgender candidates. KSOU