ಬೆಂಗಳೂರು,ಫೆಬ್ರವರಿ,28,2023(www.justkannada.in): 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿರುವ ಸರ್ಕಾರಿ ನೌಕರರ ಜತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಂದು ವಿಧಾನಸೌಧದಲ್ಲಿ ಸಭೆ ನಡೆಸಿದ್ದು ಸಂಧಾನ ಸಭೆ ವಿಫಲವಾಗಿದೆ.
ಈ ಮೂಲಕ ಸರ್ಕಾರಿ ನೌಕರರ ಜತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ನಡೆಸಿದ ಸಂಧಾನ ಮಾತುಕತೆ ಮುರಿದುಬಿದ್ದಿದೆ. ಸಭೆ ಬಳಿಕ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ, ಮುಷ್ಕರದಿಂದ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತೇವೆ . ಸರ್ಕಾರ ಯಾವಾಗ ಸಭೆಗೆ ಕರೆದರೂ ನಾವು ಹೋಗುತ್ತೇವೆ ಎಂದಿದ್ದಾರೆ.
ಸಿಎಸ್ ಕಾಲಾವಕಾಶ ನೀಡುವಂತೆ ಕೇಳಿದ್ದಾರೆ. ನಾಳಿನ ಮುಷ್ಕರ ಕೈಬಿಡುವ ಪ್ರಶ್ನೆಯೇ ಇಲ್ಲ. ಸರ್ಕಾರಿ ನೌಕರ ನಮ್ಮಪದಾಧಿಕಾರಿಗಳಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುರೆಯುತ್ತೆ. ನೌಕರರ ಮನಸ್ಥಿತಿಗೆ ವಿರುದ್ದವಾಗಿ ನಡೆಯಲು ಆಗಲ್ಲ. ಎಲ್ಲಾ ಸರ್ಕಾರಿ ನೌಕರರು ಒಗ್ಗಟ್ಟಿನಿಂದ ಇದ್ದೇವೆ. ಸರ್ಕಾರ ವಿಳಂಬ ಧೋರಣೆ ಮಾಡುತ್ತಿದೆ ಎಂದು ಸಿಎಸ್ ಷಡಾಕ್ಷರಿ ಹೇಳಿದ್ದಾರೆ.
Key words: government employees –meeting-fail- CS -Shadakshari