ಬೆಂಗಳೂರು,ನವೆಂಬರ್,8,2023(www.justkannada.in): ತಾಂತ್ರಿಕ ಸಮಸ್ಯೆಯಿಂದಾಗಿ ಗೃಹಲಕ್ಷಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಹೋಗಿಲ್ಲ. ಹೀಗಾಗಿ ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ. 15 ದಿನದೊಳಗೆ ಯೋಜನೆಗೆ ಒಳಪಡುವ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಬೆಂಗಳೂರು ಒನ್ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಯೋಜನೆಯನ್ನು ಜಾರಿ ಮಾಡಿದ ಮೇಲೆ ಮಹಿಳೆಯರಿಗೆ ಉಪಯೋಗವಾಗಿತ್ತಿದೆ. ಆಗಸ್ಟ್ 1.8 ಕೋಟಿ ಜನ ಮಹಿಳೆಯರು, ಸೆಪ್ಟೆಂಬರ್ ತಿಂಗಳಲ್ಲಿ 1.14 ರಷ್ಟು ಜನ ರಿಜಿಸ್ಟರ್ ಮಾಡಿಕೊಂಡಿದ್ದರೆ, ಅಕ್ಟೋಬರ್ ತಿಂಗಳಲ್ಲಿ 1.16 ರಷ್ಟು ಮಹಿಳೆಯರಿಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಇನ್ನು ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ, ಇದರ ಜೊತೆಗೆ ಆಧಾರ್ ಲಿಂಕ್ ಆಗದಿರುವುದಕ್ಕೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ. ಇನ್ನು 15 ದಿನದೊಳಗೆ ಎಲ್ಲರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಹೋಗಲಿದೆ ಎಂದರು.
Key words: Grihalahkshmi Yojana -money -bank account -within -15 days- Minister -Lakshmi Hebbalkar.