ಬೆಳಗಾವಿ,ಜೂನ್,20,2023(www.justkannada.in): ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಸರ್ವರ್ ಸಮಸ್ಯೆ ಉಂಟಾಗಿದ್ದು, ಅರ್ಜಿ ಸಲ್ಲಿಸಲು ಬಂದ ಜನರು ಕಾದು ಕಾದು ಸುಸ್ತಾಗುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ.
ನಮ್ಮ ಸರ್ಕಾರದ ಸರ್ವರ್ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ನಮ್ಮ ಸಿಸ್ಟಮ್ ಗಳನ್ನು ಇವಿಎಂ ರೀತಿಯಲ್ಲಿ ಹ್ಯಾಕ್ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಎಷ್ಟೇ ಹ್ಯಾಕ್ ಮಾಡಿದರೂ ನಮ್ಮ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಆನ್ ಲೈನ್ ನಲ್ಲಿ ಸಮಸ್ಯೆಯಾದರೆ ಆಫ್ ಲೈನ್ ನಲ್ಲಿ ಅರ್ಜಿ ಪಡೆಯುತ್ತೇವೆ. ಒಂದು ತಿಂಗಳು ತಡ ಆಗಬಹುದು ಅದಕ್ಕಿಂತಲೂ ಹೆಚ್ಚು ಆಗಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
Key words: Guarantee -scheme -Central government- server -hacked- Minister- Satish Jarakiholi