ಬೆಂಗಳೂರು,ನವೆಂಬರ್,7,2023(www.justkannada.in): ಬೆಂಗಳೂರಿನ ವಿವಿಧೆಡೆ ನಿನ್ನೆ ರಾತ್ರಿ ಹಲವು ಗಂಟೆಗಳ ಕಾಲ ನಿರಂತರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ತಡರಾತ್ರಿ ಬಿಬಿಎಂಪಿಯ ವಾರ್ ರೂಂಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿದರು.
ಮಳೆಯಿಂದಾಗಿ ನಗರದ ವಿವಿಧ ಭಾಗಗಳಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಪರಿಶೀಲಿಸಿ, ವಾರ್ ರೂಮ್ ಗೆ ಬಂದ ಕರೆ ಸ್ವೀಕರಿಸಿ ಮಾತನಾಡಿದರು. ಬಿಬಿಎಂಪಿ ಕೇಂದ್ರ ಕಚೇರಿಯ ಕಂಟ್ರೋಲ್ ರೂಂ, ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಗಳಿಗೆ ಭೇಟಿ ನೀಡಿ ಮಳೆಯಿಂದ ಉಂಟಾದ ಅನಾಹುತಗಳ ಪರಿವೀಕ್ಷಣೆ ಮಾಡಿದರು.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು, ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿದರು.
8 ವಲಯಗಳ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಆಯಾ ವಲಯಗಳಲ್ಲಿ ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಕಾರ್ಯನಿರ್ವಹಿಸಿ, ಮಳೆಯಿಂದಾದ ಅನಾಹುತಗಳನ್ನು ಪರಿವೀಕ್ಷಿಸಿದರು.
ಈಗ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಗಳು ಅವಘಡಗಳು ಸಂಭವಿಸಿದ ಸ್ಥಳಗಳಲ್ಲಿ ಹಾಜರಿದ್ದು, ನೀರನ್ನು ತೆರವು ಗೊಳಿಸುತ್ತಿದ್ದಾರೆ.
Key words: Heavy rain – Bangalore-DCM -DK Shivakumar -visited -BBMP -war room