ಮುಂದಿನ 6 ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ.

ಬೆಂಗಳೂರು,ಮೇ,11,2024 (www.justkannada.in):  ಬಿರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಮಳೆರಾಯ ಕೆಲದಿನಗಳಿಂದ ತಂಪೆರೆದಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ಈ ಮಧ್ಯೆ ಮುಂದಿನ 6 ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಬಾರಿ ಮಳೆಯಾಗಲಿದೆ.  ಕೆಲವು ಜಿಲ್ಲೆಗಳಲ್ಲಿ  ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಮೈಸೂರು ಮಂಡ್ಯ, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Key words: Heavy rain – forecast – state – next 6 days