ಬೆಂಗಳೂರು,ಏಪ್ರಿಲ್,29,2021(www.justkannada.in): ರೆಮ್ಡಿಸಿವಿರ್ ಪೂರೈಕೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿರುವ ಹೈಕೋರ್ಟ್ ರೆಮ್ಡಿಸಿವಿರ್ ಪೂರೈಕೆ ಹೆಚ್ಚಿಸಬೇಕು. ರೆಮ್ಡಿಸಿವಿರ್ ಅಗತ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಕೋರಿಕೆ ಸಲ್ಲಿಸಬೇಕು. ಕೋರಿಕೆ ಬಗ್ಗೆ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಮೇ 4ರೊಳಗೆ ರೆಮ್ ಡಿಸಿವಿರ್ ಪೂರೈಕೆ ಹೆಚ್ಚಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಬೆಂಗಳೂರಿನ ಪರಿಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಹೈಕೋರ್ಟ್, ಕೋವಿಡ್ ಬೆಡ್ ಸಂಖ್ಯೆ ಹೆಚ್ಚಿಸುವಂತೆ ಸರ್ಕಾರಕ್ಕೆ ಆದೇಶಿಸಿತು. ಎಲ್ಲರಿಗೂ ಜೀವಿಸುವ ಹಕ್ಕಿದೆ. ಜೀವಿಸುವ ಹಕ್ಕಿನಲ್ಲಿ ಆರೋಗ್ಯದ ಹಕ್ಕು ಸೇರಿದೆ. ಹೀಗಾಗಿ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಕರ್ತವ್ಯ.. ಕೊರೋನಾದಿಂ ಅಸಮಾನ್ಯ ಸ್ಥಿತಿ ಎದುರಾಗಿದೆ. ನಿನ್ನೆ ಬೆಂಗಳೂರಿನಲ್ಲಿ 22 ಸಾವಿರ ಕೇಸ್ ಪತ್ತೆಯಾಗಿದೆ. ಖಾಸಗಿ ಆಸ್ಪತ್ರೆಗಳು ಖಾಲಿ ಬೆಡ್ ಬಗ್ಗೆ ಮಾಹಿತಿ ನೀಡಬೇಕು ಎಂದು ಸಿಜೆ ಎ.ಎಸ್ ಓಕಾ,ನ ನ್ಯಾಯಮೂರ್ತಿ ಅರವಿಂದ ಕುಮಾರ್ ಸೂಚಿಸಿದರು.
Key words: High Court -notice – central government – increase- supply -rem decivir