ನಾನು HMT ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿ : ನಿಖಿಲ್‌ ಕುಮಾರಸ್ವಾಮಿ ಕರೆ

I have tied an HMT watch; you tie it too: Nikhil Kumaraswamy

ಯಾಕೋ ನಮ್‌ ಟೈಮೇ ಸರಿಯಾಗಿಲ್ಲ...

 

ಬೆಂಗಳೂರು, ಸೆ.06,2024: (www.justkannada.in news)ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿದ್ದ HMT ಕೈಗಡಿಯಾರಕ್ಕೆ ಮತ್ತೆ ಗತಕಾಲದ ವೈಭವವನ್ನು ಮರಳಿ ತರುವುದಾಗಿ ಕೇಂದ್ರ ಸಚಿವ ಹಾಗೂ ಕರ್ನಾಟಕದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಈಗಾಗಲೇ ಆಶ್ವಾಸನೆ ನೀಡಿದ್ದಾರೆ.

ಇದಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲು ಶ್ರಮಿಸುತ್ತಿರುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದರು. ಗೌರಿ -ಗಣೇಶ ಹಬ್ಬದ ಈ ದಿನ ರಾಜ್ಯದ ಹೆಮ್ಮೆಯ ಪ್ರತೀಕವಾಗಿದ್ದ ಎಚ್.ಎಂ.ಟಿ ವಾಚನ್ನು ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಗಿಫ್ಟ್‌ ನೀಡಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ನಿಖಿಲ್‌, ಎಚ್. ಎಂ. ಟಿ ವಾಚ್‌ ಎಲ್ಲರ ಪಾಲಿನ ನಿತ್ಯನಾಡಿಯಾಗಿತ್ತು. ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ಪೂಜ್ಯ ತಂದೆಯವರು ಹಾಗೂ ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನವಾದ ಇಂದು HMT ಕೈಗಡಿಯಾರ ಖರೀದಿಸಿ ನನ್ನ ಕೈಗೆ ಕಟ್ಟಿದರು.

ಈ ಸಂದರ್ಭದಲ್ಲಿ HMT ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಕೋಹ್ಲಿ ಇನ್ನಿತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು. ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ HMT ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ. ನಾನು HMT ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿ.

key words: I have tied, HMT watch, you tie it too, Nikhil Kumaraswamy