ಬೆಂಗಳೂರು,ಡಿಸೆಂಬರ್,2,2023(www.justkannada.in): ಸಹಕಾರ ಬ್ಯಾಂಕ್ ಗಳಲ್ಲಿ ಅಕ್ರಮ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ ಆದೇಶಿಸಿದೆ.
ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ , ವಸಿಷ್ಠ ಕೋಆಪರೇಟಿವ್ ಬ್ಯಾಂಕ್, ಗುರುಸಾರ್ವಭೌಮ ಸೌಹಾರ್ಧ ಕೋಅಪರೇಟಿವ್ ಬ್ಯಾಂಕ್ ಅಕ್ರಮ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿದೆ. ಈ ಬ್ಯಾಂಕ್ ಗಳಲ್ಲಿ ಬಹುಕೋಟಿ ಅವ್ಯವಹಾರ ನಡೆದಿತ್ತು ಎನ್ನಲಾಗಿದೆ. ಬ್ಯಾಂಕ್ ಆಡಳಿತ ಮಂಡಳಿ ನಿಯಮಬಾಹಿರವಾಗಿ ಸಾಲವನ್ನ ನೀಡಿದ್ದವು.
ಈ ನಡುವೆ ಹಣ ಸಿಗದೆ ಠೇವಣಿದಾರರು ಹೋರಾಟ ಮಾಡಿದ್ದರು. ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದರು. ಇದೀಗ ರಾಜ್ಯ ಸರ್ಕಾರ ಮೂರು ಬ್ಯಾಂಕ್ ಗಳ ಅವ್ಯವಹಾರ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿದೆ.
Key words: Illegal case – three -co-operative banks- State- govt – CBI – investigate