ಚಿಕ್ಕಬಳ್ಳಾಪುರ, ನವೆಂಬರ್,17,2020(www.justkannada.in): ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವುದಕ್ಕೆ ರಾಜ್ಯದಲ್ಲಿ ವಿರೋಧ ವ್ಯಕ್ತವಾಗಿದ್ದು ಇದರಿಂದ ಕನ್ನಡಿಗರಿಗೆ ತೊಂದರೆಯಾಗುತ್ತೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಹಿನ್ನೆಲೆಯಲ್ಲಿ ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯವಾಗಲ್ಲ ಎಂದಿದ್ದಾರೆ. ನೆಲ ಜಲ ಭಾಷೆ ವಿಚಾರದಲ್ಲಿ ಬಿಜೆಪಿ ರಾಜಿಯಾಗಲ್ಲ. ಮರಾಠ ಅಭಿವೃದ್ಧಿ ಸ್ಥಾಪನೆಯಿಂದ ದೊಡ್ಡ ತಪ್ಪು ಆಗಿಲ್ಲ. ಈ ಬಗ್ಗೆ ತಪ್ಪು ಗ್ರಹಿಕೆ ಬೇಡ. ಇದರಿಂದ ಕನ್ನಡಿಗರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ನವೆಂಬರ್ 27ರೊಳಗೆ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ನಿರ್ಧಾರವನ್ನ ವಾಪಸ್ ಪಡೆಯದಿದ್ಧರೇ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡುತ್ತೇವೆ ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.
Key words: Kannadigas-not -unfair – Maratha Development Authority- Minister- Dr.K. The reformer.