ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸ್ಫೋಟ ಕೇಸ್: ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ.

ನವದೆಹಲಿ ,ಜೂನ್,10,2024 (www.justkannada.in): ಲೋಕಸಭಾ ಕಲಾಪದಲ್ಲಿ ಸ್ಮೋಕ್ ಬಾಂಬ್ ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೈಸೂರಿನ ಮನೋರಂಜನ್ ಸೇರಿ ಆರು ಮಂದಿ ವಿರುದ್ಧ ದೆಹಲಿ ಪೊಲೀಸರು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ದೆಹಲಿಯಲ್ಲಿ  ಸಂಸತ್ ಕಲಾಪಕ್ಕೆ ನುಗ್ಗಿ ಸ್ಮೋಕ್ ಬಾಂಬ್ ಸ್ಫೋಟಿಸಿದ್ದ ಪ್ರಕರಣಕ್ಕೆ  ಸಂಬಂಧಿಸಿದಂತೆ ಮೈಸೂರಿನ ಡಿ. ಮನೋರಂಜನ್, ಲಲಿತ್ ಝಾ, ಅಮೋಲ್‌ಸಿಂಧೆ, ಮಹೇಶ್ ಕುಮಾವತ್, ಸಾಗರ್ ಶರ್ಮಾ ಮತ್ತು ನೀಲಂ ಆಜಾದ್ ಆರು ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.  ಆರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, 6 ಮಂದಿ ಆರೋಪಿಗಳಿಗೆ ಜುಲೈ 15 ರವರಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಡಿಸೆಂಬರ್ 13, 2023 ರಂದು ಈ ಘಟನೆ ನಡೆದಿತ್ತು. ಆರೋಪಿಗಳು  ವೀಕ್ಷಕರ ಗ್ಯಾಲರಿ ಪಾಸ್ ಪಡೆದು ಒಳ ನುಸುಳಿ ಈ ಕೃತ್ಯವೆಸಗಿದ್ದರು. ಆಗ ಸಂಸದರಾಗಿ‍ದ್ದ ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಪಾಸ್ ಪಡೆದು ಅವಾಂತರ ಸೃಷ್ಠಿಸಿದ್ದರು

ಈ ಸಂಬಂಧ ಯುಎಪಿಎ ಕಾಯ್ದೆ ಅಡಿ ಪ್ರಕರಣ ಪೊಲೀಸರು ದಾಖಲಿಸಿಕೊಂಡಿದ್ದರು. ದೆಹಲಿ ಪೊಲೀಸರು ಮೈಸೂರಿನಲ್ಲಿ ನಿರಂತರ ತಲಾಶ್ ನಡೆಸಿ, ಮನೋರಂಜನ್ ಕುಟುಂಬಸ್ಥರು, ಸ್ನೇಹಿತರ ವಿಚಾರಣೆ ನಡೆಸಿದ್ದರು. ಮನೆ, ಸ್ನೇಹಿತರ ಕಚೇರಿಗಳ ಶೋಧ ನಡೆಸಿ ಮಹತ್ವದ ದಾಖಲೆಗಳನ್ನ ಸಂಗ್ರಹಿಸಿದ್ದರು.

Key words: Lok Sabha, smoke bomb, blast, Charge sheet