ಬೆಂಗಳೂರು, ಡಿಸೆಂಬರ್,16,2023(www.justkannada.in): ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಇಂಧನ ಸಚಿವ ಕೆ.ಜೆ ಜಾರ್ಜ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ತೆಲಂಗಾಣದ ಕರೀಂನಗರದ ನಿವಾಸಿ ರವಿಕಾಂತ ಶರ್ಮಾ(33) ಬಂಧಿತ ಆರೋಪಿ. ರವಿಕಾಂತಶರ್ಮಾ ತೆಲಂಗಾಣದ ಬಿಆರ್ ಎಸ್ ಪಾರ್ಟಿಯ ಐಟಿ ಸೆಲ್ ಉದ್ಯೋಗಿಯಾಗಿದ್ದಾರೆ ಎನ್ನಲಾಗಿದೆ, ಈ ನಡುವೆ ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆರೋಪಿ ರವಿಕಾಂತ ಶರ್ಮಾ ಪೋಸ್ಟ್ ಹರಿಬಿಟ್ಟಿದ್ದರು.
ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹಜ್ಯೋತಿ ಯೋಜನೆ ಬಗ್ಗೆ ನಕಲಿ ಆಡಿಯೋ ಕ್ಲಿಪ್ವೊಂದನ್ನ ಶೇರ್ ಮಾಡಿ ಪೋಸ್ಟ್ ಹರಿಬಿಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Key words: Man- arrested – posting- against –Minister- KJ George