ಮಂಡ್ಯ,ಸೆಪ್ಟಂಬರ್,21,2023(www.justkannada.in): ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಿ ಎಂದು ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಆದೇಶಿಸಿದ ಬೆನ್ನಲ್ಲೆ ಮಂಡ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು ನೀರು ಹರಿಸುವುದಕ್ಕೆ ಆದೇಶಿಸಿರುವುದನ್ನ ಖಂಡಿಸಿ ರೈತರು ಪ್ರತಿಭಟನೆಗಿಳಿದಿದ್ದಾರೆ.
ತಮಿಳುನಾಡಿಗೆ ನೀರು ಹರಿಸುವುದಕ್ಕೆ ಸುಪ್ರೀಂಕೋರ್ಟ್ ಆದೇಶಿಸಿರುವುದನ್ನ ಖಂಡಿಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಧರಣಿ ನಡೆಸಿ ಸುಪ್ರೀಂಕೋರ್ಟ್ ಆದೇಶದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನ ಖಂಡಿಸಿ ಕರವೇ ಕಚೇರಿಯಿಂದ ವಿಧಾನಸೌಧದವರೆಗೆ ಕರ್ನಾಟಕ ರಕ್ಷಣ ವೇದಿಕೆ ಪಾದಯಾತ್ರೆ ಹಮ್ಮಿಕೊಂಡಿದೆ. ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧರಿಸಿದೆ.
Key words: Mandya –protest-against -Supreme court-Order