ಬೆಂಗಳೂರು,ನವೆಂಬರ್,6,2023(www.justkannada.in): ಬೆಂಗಳೂರಿನಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ನಗರಕ್ಕೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚನೆ ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದ್ದಾರೆ. ಆಹಾರಕ್ಕಾಗಿ ಕಾಡುಪ್ರಾಣಿಗಳು ನಾಡಿಗೆ ಬರುತ್ತವೆ ಕಾಡು ಪ್ರಾಣಿಗಳನ್ನಸೆರೆ ಹಿಡಿಯಲು ಕಾರ್ಯಪಡೆ ರಚಿಸಿ. ಅತ್ಯಾಧುನಿ ಕ ಸಲಕರೆಣೆಗಳನ್ನ ಒದಗಿಸಲು ಸೂಚಿಸಿದ್ದಾರೆ.
ಇತ್ತೀಚೆಗಷ್ಟೆ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು. ಕೊನೆಗೆ ಸೆರೆ ಹಿಡಿಯುವ ವೇಳೆ ಅರಣ್ಯ ಸಿಬ್ಬಂದಿಗಳ ಗುಂಡೇಟಿಗೆ ಬಲಿಯಾಗಿತ್ತು.
Key words: Minister -Ishwar Khandre -instructed -separate -leopard task force -bangalore