ಬೆಂಗಳೂರಿನಲ್ಲಿ NIA ದಾಳಿ: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ.

ಬೆಂಗಳೂರು,ನವೆಂಬರ್,8,2023(www.justkannada.in):  ರೋಹಿಂಗ್ಯಾಗಳಿಂದ ಉಗ್ರ ಚಟುವಟಿಕೆ  ಆರೋಪ ಹಿನ್ನೆಲೆ ಬೆಳ್ಳಂಬೆಳಿಗ್ಗೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಎನ್ ಐಎ ದಾಳಿ ನಡೆಸಿ8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನ ವಶಕ್ಕೆ ಪಡೆದಿದೆ.

ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ  15 ಎನ್ ಐಎ ತಂಡಗಳು  ಏಕಕಾಲಕ್ಕೆ ದಾಳಿ ನಡೆಸಿದೆ.  ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ನಡೆಸಿ ಪರಿಶೀಲನೆ ಮಾಡುತ್ತಿದೆ.

8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Key words: NIA -raid –Bengaluru- 8 illegal Bangladeshi- immigrants -arrested