ಮೈಸೂರು,ಏಪ್ರಿಲ್,12,2023(www.justkannada.in): ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣೆಗೆ ಮೈಸೂರು ಜಿಲ್ಲಾಡಳಿತ ಸನ್ನದ್ದವಾಗುತ್ತಿದ್ದು ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಸುದ್ದಿಗೋಷ್ಠಿ ಮಾಹಿತಿ ನೀಡಿದ್ದಾರೆ.
ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಹೊರಡಿಸಲಾಗುವುದು. ನಾಳೆಯಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗುತ್ತಿದೆ. ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ , ಏಪ್ರಿಲ್ 20ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದು, ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಏಪ್ರಿಲ್ 24 ಕಡೆಯ ದಿನವಾಗಲಿದೆ ಎಂದು ಡಿಸಿ ಡಾ.ಕೆ.ವಿ ರಾಜೇಂದ್ರ ಮಾಹಿತಿ ನೀಡಿದರು.
ಇನ್ನು ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತಗಳ ಎಣಿಕೆ ನಡೆಯಲಿದೆ. ಮೇ 15 ಕ್ಕೆ ಚುನಾವಣಾ ಪ್ರಕ್ರಿಯೆಗೆ ತೆರೆ ಬೀಳಲಿದೆ ಎಂದು ಡಾ ಕೆ.ವಿ ರಾಜೇಂದ್ರ ತಿಳಿಸಿದರು.
Key words: Notification – assembly –elections-tomorrow-Mysore DC -Dr.KV Rajendra