ಬೆಂಗಳೂರು,ಫೆಬ್ರವರಿ,3,2023(www.justkannada.in): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಯೊಬ್ಬರೂ ಟ್ರಾಫಿಕ್ನಿಂದ ಹೈರಾಣಾಗಿದ್ದಾರೆ. ಈ ಮಧ್ಯೆ ಟ್ರಾಫಿಕ್ ನಲ್ಲಿ ಅಂಬ್ಯುಲೆನ್ಸ್ ಸಿಲುಕಿದ ಹಿನ್ನೆಲೆ ಆಸ್ಪತ್ರೆಗೆ ರವಾನಿಸಲು ತಡವಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಬಲಿಯಾದ ಮನಕಲಕುವ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಹುದಾ ಕೌಸರ್ ನೆಲಮಂಗಲ ಬಳಿ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ಪಡೆಯಲಾಗದೆ ಮೃತಪಟ್ಟಿದೆ. ನಿನ್ನೆ ತುಮಕೂರು ಜಿಲ್ಲೆ ತಿಪಟೂರಿನ ಕೈಮರಾ ಬಳಿ ಬುಲೆರೋ ವಾಹನ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿ ಅಹಮದ್, ರುಕ್ಸಾನಾ ದಂಪತಿ ಹಾಗೂ ಪುತ್ರಿ ಹುದಾ ಕೌಸರ್ ಗಾಯಗೊಂಡಿದ್ದರು.
ಈ ವೇಳೆ ತಂದೆ ಅಹಮದ್, ತಾಯಿ ರುಕ್ಸಾನಾಗೆ ತಿಪಟೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನ ಹಿಮ್ಸ್ ಗೆ ರವಾನಿಸಲಾಗಿತ್ತು. ಬಳಿಕ ಹಿಮ್ಸ್ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಗುವನ್ನ ಬೆಂಗಳೂರಿಗೆ ರವಾನಿಸಲು ಆ್ಯಂಬುಲೆನ್ಸ್ ಮೂಲಕ ತೆರಳುತ್ತಿದ್ದ ವೇಳೆ ನೆಲಮಂಗಲ ಬಳಿ ಟ್ರಾಫಿಕ್ ಜಾಮ್ ಗೆ ಆ್ಯಂಬುಲೆನ್ಸ್ ಸಿಲುಕಿದೆ. ಟ್ರಾಫಿಕ್ನಿಂದ ಆಸ್ಪತ್ರೆಗೆ ತೆರಳಲಾಗದೆ ಒಂದೂವರೆ ವರ್ಷದ ಹುದಾ ಮೃತಪಟ್ಟಿದ್ದಾಳೆ. ಮಗುವನ್ನು ಕಳೆದುಕೊಂಡು ನಡು ರಸ್ತೆಯಲ್ಲೇ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.
Key words: old child -died – Bengaluru -traffic – emergency treatment.
..