ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು- ಸಿಎಂ ಸಿದ್ದರಾಮಯ್ಯ.

ಬೆಂಗಳೂರು ಜನವರಿ,16,2024(www.justkannada.in): ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದರು.

ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ.  ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕಳ್ಳತನ ಹೆಚ್ಚಾಗುತ್ತಿದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರೆದರೆ DCP ಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

Key words: Police- officers- transfers, -using- caste – worst- CM- Siddaramaiah

ENGLISH SUMMARY….

  • CM Siddaramaiah spoke at an annual conference of senior police officers in Karnataka
  • He warned against police officers using caste to seek transfers
  • He emphasized the need to strengthen the constitution and use modern technology to reduce crime
  • CM Siddaramaiah assured that vacant police posts will be filled and a new police building will be constructed
  • He held DCPs responsible for increasing thefts and failing patrolling systems
  • Home Minister G. Parameshwar, Home Secretary Umashankar, and other officials were present at the conference