ಮೈಸೂರು,ಜುಲೈ,14,2021(www.justkannada.in): ಕೇರಳದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ.ಕಬಿನಿ ಭಾಗದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬುಗಾದಿ ಗೌತಮ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾಧಿಕಾರಿ ಬಗಾದಿ ಗೌತಮ್ ಚಾಲನೆ ನೀಡಿದರು. ಇದು 2021 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಸಂಬಂಧಿಸಿದ ಪ್ರಚಾರ ವಾಹನವಾಗಿದೆ. ಈ ವೇಳೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಯೋಗೀಶ್, ಕೃಷಿ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ಮಾಧ್ಯಮಗಳ ಜತೆ ಮಾತನಾಡಿದ ಜಿಲ್ಲಾಧಿಕಾರಿ ಬಗಾದಿ ಗೌತಮ್, ಈಗಾಗಲೇ ಕಬಿನಿ ಅಧಿಕಾರಿಗಳ ಜೊತೆಗೆ ಸಭೆ ಮಾಡಲಾಗಿದೆ. ಸತತ ವೈನಾಡಿ ಜೊತೆ ನೀರಾವರಿ ಅಧಿಕಾರಿಗಳು ಸಂಪರ್ಕದಲ್ಲಿ ಇದ್ದಾರೆ. ಈಗಾಗಲೇ ನಾಲೆಗಳಿಗೆ ನೀರನ್ನು ಬಿಡಲಾಗಿದೆ. ನದಿಗೂ ಕೂಡ ನೀರು ಹರಿಸಲಾಗುವುದು ಎಂದರು.
ಮೈಸೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿರುವುದು ನಿಜ.
ಮೈಸೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿರುವುದು ನಿಜ. ಪಾಸಿಟಿವ್ ರೇಟ್ 2ಕ್ಕೆ ಇಳಿದಿದೆ. ಅದ್ರೆ ಇನ್ನೂ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಜನರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ಕೋವಿಡ್ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು.ಮೂರನೇ ಅಲೆಗೂ ಕೂಡ ನಾವು ಸಿದ್ದತೆ ಮಾಡಿಕೊಂಡಿದ್ದೇವೆ. ಕೋವಿಡ್ ಸಂಪೂರ್ಣ ನಿಯಂತ್ರಣ ಬರುವವರೆಗೆ ಕೋವಿಡ್ ಮಿತ್ರಗಳ ಕಾರ್ಯ ನಿರ್ವಹಣೆ ಮಾಡುತ್ತವೆ ಎಂದು ಬಗಾದಿ ಗೌತಮ್ ತಿಳಿಸಿದರು.
Key words: Precautions Action -Rain -Kabini –mysore-DC -Dr Bagadi Gautam