ಬೆಂಗಳೂರು,ಫೆಬ್ರವರಿ,8,2024(www.justkannada.in): ಕಳೆದ ವರ್ಷ ನವೆಂಬರ್ನಲ್ಲಿ ವೈಟ್ಫೀಲ್ಡ್ ನ ಕಾಡುಗೋಡಿಯಲ್ಲಿ ಪಾದಾಚಾರಿ ಮಾರ್ಗದಲ್ಲಿ ವಿದ್ಯುತ್ ತಂತಿ ತುಳಿದು ತಾಯಿ-ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನ ಸಚಿವ ಕೆ.ಜೆ ಜಾರ್ಜ್ ರಾಜೀನಾಮೆಗೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆರ್. ಅಶೋಕ್, ಬೆಂಗಳೂರಿನಲ್ಲಿ ಕಳೆದ ನವೆಂಬರ್ ನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ-ಮಗು ಮೃತಪಟ್ಟ ಪ್ರಕರಣಕ್ಕೆ ‘ಇಲಿ’ ಕಾರಣ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿದ್ದ ಸಚಿವ ಜಾರ್ಜ್ ಅವರ ಹೊಣೆಗೇಡಿತನ ಈಗ ತನಿಖಾ ವರದಿಯಲ್ಲಿ ಬಯಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾನ್ಯ ಜನರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದ್ದು, ಸಿಎಂ ಸಿದ್ದರಾಮಯ್ಯ ನವರು ಈ ಕೂಡಲೇ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ಪಡೆದುಕೊಂಡು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ವರ್ಷ ನವೆಂಬರ್ನಲ್ಲಿ ವೈಟ್ಫೀಲ್ಡ್ನ ಕಾಡುಗೋಡಿಯಲ್ಲಿ ಪಾದಾಚಾರಿ ಮಾರ್ಗದಲ್ಲಿ ವಿದ್ಯುತ್ ತಂತಿ ತುಳಿದು ತಾಯಿ-ಮಗು ಮೃತಪಟ್ಟ ದುರ್ಘಟನೆ ನಡೆದಿತ್ತು. ಈ ಘಟನೆಯ ತನಿಖೆ ನಡೆಸಿದ ತಜ್ಞರ ಸಮಿತಿ ಈ ಘಟನೆಗೆ ತಾಂತ್ರಿಕ ಲೋಪಗಳೇ ಕಾರಣ ಎಂದು ವರದಿ ನೀಡಿದ್ದಾರೆ.
ಈ ಹಿಂದೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ವಿದ್ಯುತ್ ಸ್ಪರ್ಶದಿಂದ ಸಂಭವಿಸಿದ ತಾಯಿ-ಮಗು ಸಾವಿಗೆ ಇಲಿ ಕಾರಣ. ಹೆಗ್ಗಣ ವೈರ್ ಕಡಿದು ತಂತಿ ತುಂಡಾಗಿ ಬೀಳುವಂತೆ ಮಾಡಿದೆ ಎಂದು ಹೇಳಿದ್ದರು. ಸದ್ಯ ಈಗ ತನಿಖೆ ವರದಿ ಸತ್ಯ ಬಯಲು ಮಾಡಿದ್ದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಟ್ವೀಟ್ ಮೂಲಕ ಟ್ವೀಟ್ ಮಾಡಿ ಸಚಿವ ಜಾರ್ಜ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Key words: R. Ashok -demands -resignation -Energy Minister- KJ George.