ಬೆಂಗಳೂರು, ಅಕ್ಟೋಬರ್ ,30,2024 (www.justkannada.in): ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಸಜ್ಜಾಗಿದ್ದು, ಈ ಮಧ್ಯೆ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ಹಿನ್ನೆಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವನ್ನು ಬಹಳಷ್ಟು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಅಂಗವಾಗಿ ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮವನ್ನು ಸರ್ಕಾರ ಜಾರಿಗೆ ತಂದಿದೆ. ಸರ್ಕಾರಿ ಅಧಿಕಾರಿಗಳು ಧರಿಸುವ ಗುರುತಿನ ಚೀಟಿ ಟ್ಯಾಗ್ ನಾಡಧ್ವಜ ಬಣ್ಣದಲ್ಲೇ ಇರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ಅಧಿಕಾರಿಗಳು ಕನ್ನಡ ರಾಜ್ಯೋತ್ಸವದೊಳಗೆ ಕಡ್ಡಾಯವಾಗಿ ಗುರುತಿನ ಚೀಟಿಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಅನ್ನೇ ಧರಿಸಬೇಕು ಎಂದು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಡಿಪಿಎಆರ್ ಸೂಚನೆ ನೀಡಿದೆ.
Key words: Red-yellow color, tag, mandatory, government employee, ID card