ಬೆಳಗಾವಿ,ಫೆಬ್ರವರಿ,12,2022(www.justkannada.in): ಹಿಜಾಬ್ ವಿವಾದ ತಾರಕಕ್ಕೇರಿದ್ದು ಪ್ರಕರಣ ಹೈಕೋರ್ಟ್ ನಲ್ಲಿದೆ. ಈ ನಡುವೆ ರಾಜ್ಯದಲ್ಲಿ ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಶಾಲೆ ಆರಂಭವಾಗಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹಿಜಾಬ್ ಸಂಬಂಧ ಹೈಕೋರ್ಟ್ ನಲ್ಲಿ ಡೇ ಟುಡೇ ವಿಚಾರಣೆ ನಡೆಯುತ್ತಿದೆ. ಈಗಾಗಲೇ ಹೈಕೋರ್ಟ್ ಮಧ್ಯಂತರ ಆದೇಶ ಕೊಟ್ಟಿದ್ದಾರೆ. ಮೊದಲು ರಾಜ್ಯದಲ್ಲಿ ಶಾಂತಿ ನೆಲಸಬೇಕು. ಹಿಜಾಬ್ ಪ್ರಕರಣ ಕೋರ್ಟ್ ನಲ್ಲಿದೆ. ಮಕ್ಕಳಲ್ಲಿ ಯಾವುದೇ ಭಿನ್ನಾಭಿಪ್ರಾಯ ಮೂಡದಂತೆ ಶಾಲೆ ಆರಂಭವಾಗಬೇಕು. ಹೈಕೋರ್ಟ್ ಇದನ್ನೇ ಹೇಳಿದ್ದು. ರಾಜ್ಯ ಸರ್ಕಾರ ಶಾಂತಿ ನೆಲೆಸುವಂತೆ ಕ್ರಮ ಕೈಗೊಳ್ಳಲಾಗುತ್ತದೆ ರಾಜ್ಯದಲ್ಲಿ ಶಾಲೆ ಪುನಾರಂಭಕ್ಕೆ ಆದ್ಯತೆ ನೀಡುತ್ತೇವೆ ಎಂದರು.
ಬಜೆಟ್ ಪ್ರಕ್ರಿಯೆ ಶುರುವಾಗಿದೆ. ಇಲಾಖಾವಾರು ಸಭೆ ನಡೆಸಿದ್ದೇವೆ ಸೋಮವಾರ, ಮಂಗಳವಾರ ಸಭೆ ಮುಂದುವರೆಯಲಿದೆ. ಫೆಬ್ರವರಿ 25ರ ನಂತರ ಎಲ್ಲಾ ಇಲಾಖೆಗಳ ಬೇಡಿಕೆ ಗಮನಿಸಿ ಬಜೆಟ್ ಮಂಡಿಸಲಾಗುತ್ತದೆ ಬಜೆಟ್ ನಲ್ಲಿ ಏನಾಗುತ್ತೇ ಎಂದು ಮೊದಲೇ ಹೇಳಲಾಗುವುದಿಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
Key words: school – children –CM- Basavaraja Bommai.