ಬೆಂಗಳೂರು,ಅಕ್ಟೋಬರ್,6,2023(www.justkannada.in): ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ನಡೆದಿದ್ದ ರಾಗಿಗುಡ್ಡಕ್ಕೆ ಬಿಜೆಪಿ ನಾಯಕರ ಸತ್ಯಶೋಧನಾ ತಂಡ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ನಾವು ಸೂಜಿತರಹ ಕೆಲಸ ಮಾಡಿದರೇ ಬಿಜೆಪಿ ಕತ್ತರಿ ತರಹ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಬಿಜೆಪಿ ಅವರ ಸತ್ಯಶೋಧಕ ಏನಿದೆ? ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಾವು ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದ್ದೇವೆ. ನಾವು ಸೂಜಿ ತರಹ ಹೋಲಿಯುವ ಕೆಲಸ ಮಾಡುತ್ತಿದ್ದರೆ ಅವರು ಕತ್ತಿ ತರಹ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದೇ ಬಿಜೆಪಿಗೂ, ಕಾಂಗ್ರೆಸ್ಗೂ ಇರುವ ವ್ಯತ್ಯಾಸ ಎಂದು ವಾಗ್ದಾಳಿ ನಡೆಸಿದರು.
ಕುಡಿತ ತಪ್ಪಿಸಲು ಸಾಧ್ಯವಿಲ್ಲ: ಸೂಕ್ತ ಪ್ರದೇಶಗಳಲ್ಲಿ ಬಾರ್ ಗಳನ್ನು ತೆರೆಯಲಾಗುವುದು.
ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ, ಮಾಲ್ ಹಾಗೂ ಸೂಪರ್ ಮಾರ್ಕೆಟ್ಗಳಲ್ಲಿ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಿಗೆ ಪರವಾನಗಿ ನೀಡಲು ಚಿಂತನೆ ನಡೆಸಿದೆ ಎಂಬ ವಿಚಾರ ಕುರಿತು ರಾಮನಗರದಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ‘ಕುಡಿಯುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಾಗುವುದಿಲ್ಲ. ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ, ಹಳ್ಳಿಯಲ್ಲಿ ನಾವು ಬಾರ್ ತೆಗೆಯುವುದಿಲ್ಲ. ಈ ಕುರಿತು ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ಬಾರ್ ಗಳನ್ನು ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
Key words: shimoga- roit-case-BJP-DCM-DK Shivakumar