ಮೈಸೂರು,ಜ,14,2020(www.justkannada.in): ಡಾ.ಸರೋಜಿನಿ ಮಹಿಷ ಪರಿಷ್ಕೃತ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಸಹಿಸಂಗ್ರಹ ಚಳುವಳಿ ನಡೆಸಲಾಯಿತು.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಕದಂಬ ಸೈನ್ಯ ಕನ್ನಡ ಸಂಘಟನೆಯಿಂದ ಸಹಿ ಸಂಗ್ರಹ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕನ್ನಡಿಗೆ ಉದ್ಯೋಗಾವಕಾಶ ನೀಡುವಂತೆ ಸಿಎಂಗೆ ಮನವಿ ಸಲ್ಲಿಸುವುದು. ಈ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಒತ್ತಾಯ ಮಾಡಲಾಯಿತು.
ಐಟಿ, ಬಿಟಿ ಹಾಗೂ ಬ್ಯಾಂಕ್ ಕಂಪನಿಗಳಿಗಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವಂತೆ ಕದಂಬ ಸೈನ್ಯ ಕನ್ನಡ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.
Key words: Signature Collection Movement – Mysore –protest- implementation -Dr. Sarojini Mahisha -report