ಪುಣೆ, ಅಕ್ಟೋಬರ್ 10, 2019 (www.justkannada.in): ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ, ಟೀಮ್ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತಕ್ಕೆ, ದಕ್ಷಿಣ ಆಫ್ರಿಕಾ ವೇಗಿ ಕಗಿಸೋ ರಬಾಡ ಅರಂಭದಲ್ಲೇ ಮುಳುವಾಗಿದ್ದಾರೆ.
9ನೇ ಓವರ್ನ ಕೊನೆಯ ಎಸೆತದಲ್ಲಿ ರೋಹಿತ್ ಶರ್ಮಾ, ರಬಾಡ ಬೌಲಿಂಗ್ನಲ್ಲಿ ವಿಕೆಟ್ ಕೀಪರ್ ಕ್ವಿಂಟನ್ ಡಿಕಾಕ್ಗೆ ವಿಕೆಟ್ ಒಪ್ಪಿಸಿದ್ರು. 35 ಎಸೆತಗಳಲ್ಲಿ 14 ರನ್ಗಳಿಸಿದ್ದ ರೋಹಿತ್, ಪೆವಿಲಿಯನ್ ಸೇರಿಕೊಂಡಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಟೀಂ ಇಂಡಿಯಾ ಚೇತರಿಕೆ ಆಟ ಪ್ರದರ್ಶಿಸಿದೆ. ಸದ್ಯ 1 ವಿಕೆಟ್ ನಷ್ಟಕ್ಕೆ 102 ರನ್ ಗಳಿಸಿದೆ.