ಬೆಂಗಳೂರು, ಜನವರಿ 31,2022(www.justkannada.in): ಪ್ರತಿಯೊಬ್ಬರೂ ನೀರನ್ನು ವ್ಯರ್ಥ ಮಾಡದೇ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ಬೆಳಿಗ್ಗೆ ಕೆ ಅರ್.ಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹೆಚ್.ಎ.ಎಲ್ ನ ಜಗದೀಶ್ ನಗರದಲ್ಲಿ 7.50 ದಶಲಕ್ಷ ಲೀಟರ್ ಸಾಮರ್ಥ್ಯದ ಚೌಕಾಕಾರದ ನೆಲಮಟ್ಟದ ಜಲ ಸಂಗ್ರಹಾರವನ್ನು ಲೋಕಾರ್ಪಣೆ ನೆರವೇರಿಸಿ ಮಾತನಾಡಿದರು.
ಈ ಯೋಜನೆಯಿಂದ ಒಂಭತ್ತು ಪ್ರಮುಖ ಬಡಾವಣೆಗಳಿಗೆ ನೀರನ್ನು ಒದಗಿಸಲಾಗುವುದು. ಕೆ.ಆರ್.ಪುರಂನ ಸಮಗ್ರ ಅಭಿವೃದ್ಧಿಗೆ ದಾಖಲೆಯ ಕೆಲಸಗಳನ್ನು ಸಚಿವ ಭೈರತಿ ಬಸವರಾಜ್ ಅವರು ಮಾಡಿದ್ದು, ಆ ಪೈಕಿ ಜಿ.ಎಲ್.ಆರ್ ಕೆಲಸವೂ ಒಂದು. ಜನಪರ, ಜನರ ಬಗ್ಗೆ ಕಳಕಳಿ ಇರುವ ಜನ ಸೇವಕರಾಗಿ ಕೆಲಸವನ್ನು ಬೈರತಿ ಬಸವರಾಜ ಅವರು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಕೆ.ಅರ್.ಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವೈದ್ಯಕೀಯ ಮತ್ತು ಅರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಕ್ಷೇತ್ರದ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Key words: square feet – groundwater- CM Basavaraj bommai