ಬೆಂಗಳೂರು, ಮೇ 16, 2024 (www.justkannada.in): ಭಾರತದ ಖ್ಯಾತ ಫುಟ್ಬಾಲ್ ಆಟಗಾರ ಸುನಿಲ್ ಚೇಟ್ರಿ ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ.
ಜೂನ್ 6ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಕುವೈಟ್ ನಡುವೆ ಪಂದ್ಯ ನಡೆಯಲಿದ್ದು, ಇದರಲ್ಲಿ ಸುನಿಲ್ ಚೇತ್ರಿ ಆಡಲಿದ್ದಾರೆ. ಆ ಬಳಿಕ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ತಾವು ಪಾಲ್ಗೊಳ್ಳುವುದಿಲ್ಲ ಎಂದು ಚೇಟ್ರಿ ತಿಳಿಸಿದ್ದಾರೆ.
ಈ ಮೂಲಕ ಜೂನ್ 6 ರಂದು ಕುವೈತ್ ವಿರುದ್ಧ ನಡೆಯಲಿರುವ ಪಂದ್ಯ ತನ್ನ ಕೊನೆ ಅಂತಾರಾಷ್ಟ್ರೀಯ ಪಂದ್ಯ ಎಂದು ತಿಳಿಸಿದ್ದಾರೆ.
ಭಾರತ ಫುಟ್ಬಾಲ್ ತಂಡದಲ್ಲಿ ಸ್ಟಾರ್ ಆಟಗಾರರಾಗಿದ್ದ ಸುನಿಲ್ ಚೇಟ್ರಿ, ತಂಡದ ಗೆಲುವಿನ ಪ್ರಮುಖ ಕಾರಣಕರ್ತರಾಗಿದ್ದರು.