ಬೆಂಗಳೂರು,ಮೇ,9,2023(www.justkannada.in): ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರಿದ್ದು, ನಾಳೆ ಮತದಾನ ನಡೆಯಲಿದೆ. ಈ ಮಧ್ಯೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಸೋಲು ಗೆಲುವಿನ ಮೇಲೆ ಜೂಜು, ಬೆಟ್ಟಿಂಗ್ ನಡೆಯುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಜೂಜು, ಬೆಟ್ಟಿಂಗ್ ಅಡ್ಡೆಗಳ ಮೇಲೆ ಕಣ್ಗಾವಲು ಇಟ್ಟಿದ್ದಾರೆ.
ಕೆಲವು ಪ್ರಮುಖ ಅಭ್ಯರ್ಥಿಗಳು, ದೊಡ್ಡ ಫೈಟ್ ಇರುವ ಕ್ಷೇತ್ರಗಳಲ್ಲಿ ಕೆಲವು ಆ್ಯಪ್ ಮೂಲಕ ಚುನಾವಣೆ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಸಿಸಿಬಿಗೆ ಮಾಹಿತಿ ಬಂದಿದೆ. ಈ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಆ್ಯಪ್ ಗಳ ಮೇಲೆ ನಿಗಾ ಇರಿಸಿದ್ದಾರೆ. ಜೊತೆಗೆ ಕೆಲವು ವ್ಯಕ್ತಿಗಳ ಮೇಲೆಯೂ ನಿಗಾ ಇಡಲಾಗಿದೆ. ಚುನಾವಣೆಯಲ್ಲಿ ಬೆಟ್ಟಿಂಗ್ ಕಂಡು ಬಂದಲ್ಲಿ ಕಠಿಣ ಕ್ರಮಕ್ಕೆ ಪೊಲೀಸರು ನಿರ್ಧರಿಸಿದ್ದಾರೆ.
ಜೂಜು ಮತ್ತು ಬೆಟ್ಟಿಂಗ್ ಮೇಲೆ ನಿಗಾವಹಿಸುವಂತೆ ಸಿಸಿಬಿ ಪೊಲೀಸರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಬೆಟ್ಟಿಂಗ್ ತಡೆಗಾಗಿ ಸಿಸಿಬಿ ವಿಶೇಷ ತಂಡ ಕಾರ್ಯಾಚರಣೆಗಿಳಿದಿದೆ.
Key words: Surveillance -CCB Police – Gambling – Betting