ಬೆಂಗಳೂರು,ನವೆಂಬರ್,18,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷಗಳು ವರ್ಗಾವಣೆ ದಂಧೆ ಆರೋಪ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ವರ್ಗಾವಣೆ ದಂಧೆ ಆಗಿದ್ದರೆ ವಿಪಕ್ಷಗಳು ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದಿದ್ದಾರೆ.
ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿರುವ ವಿವೇಕಾನಂದಗೂ ಪೊಲೀಸ್ ಇಲಾಖೆಯಲ್ಲಿನ ವಿವೇಕಾನಂದಗೂ ಸಂಬಂಧ ಇಲ್ಲ. ಅವರು ಹೇಳಿದ್ದು ಕಾಕತಾಳೀಯ ಆಗಿರಬೇಕು. ವರ್ಗಾವಣೆ ದಂಧೆ ಆಗಿದ್ದರೆ ವಿಪಕ್ಷಗಳು ಅಧಿವೇಶನದಲ್ಲಿ ಪ್ರಸ್ತಾಪಿಸಲಿ. ಸಮಾಧಾನ ಆಗುವ ರೀತಿಯಲ್ಲೇ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ತಿಳಿಸಿದರು.
Key words: transfer -scam – session – Home Minister- Dr. G. Parameshwar.