ಬೆಂಗಳೂರು,ಸೆಪ್ಟಂಬರ್,27,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇತ್ತ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ ಐಆರ್ ದಾಖಲಾಗಿದೆ. ಅತ್ತ ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಹೌದು ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿಯಿಂದ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ ಏರ್ ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ತೆರಳಿದ್ದಾರೆ.
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಮಾಡಿದ್ದರು. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ನೀಡಲಾಗಿತ್ತು. ಆದರೆ ಸೋಮವಾರ ಬೇರೆ ಕೆಲಸವಿರುವುದರಿಂದ ಇಂದೇ ವಿಚಾರಣೆಗೆ ಬರುವುದಾಗಿ ತಿಳಿಸಿದ್ದರು.
Key words: Union Minister, HDK, attended, Lokayukta, hearing