ಮೂಡಿಗೆರೆ ನವೆಂಬರ್, 7,2023(www.justkannada.in): ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ 29 ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ ತಕ್ಷಣ 15 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ತುರ್ತು ಸಭೆ ನಡೆಸಿದರು. ಪಟ್ಟಣಕ್ಕೆ ಬಂದಿರುವ ಕಾಡಾನೆಗಳನ್ನು ವಾಪಾಸ್ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಮೃತ ಮೀನಾ ಅವರ ಮೃತದೇಹ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ಜತೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಕಾಡಾನೆ ಹಾವಳಿ ತಪ್ಪಿಸಲು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಸೂಚನೆ ನೀಡಿದ್ದೇನೆ. ಅರಣ್ಯ ಸಚಿವರೂ ಇಲ್ಲಿಗೆ ಬಂದು ಸುದೀರ್ಘ ಸಭೆ ನಡೆಸಿ ರಕ್ಷಣಾ ಕಾರ್ಯಗಳ ಕುರಿತಾಗಿ ಕ್ರಮ ಕೈಗೊಳ್ಳುತ್ತಾರೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಾಫಿ ತೋಟಗಳು ಇರುವುದರಿಂದ ಕಾಡಾನೆಗಳು ಬರುತ್ತಿವೆ. ರೈಲ್ವೇ ಫೆನ್ಸಿಂಗ್ ಹಾಕುವುದೂ ಸೇರಿ ಅಗತ್ಯ ಕ್ರಮಗಳ ಕುರಿತು ಟಾಸ್ಕ್ ಫೋರ್ಸ್ ಗೆ ಸ್ಪಷ್ಟ ಸೂಚನೆ ನೀಡಲು ಅರಣ್ಯ ಸಚಿವರ ಜತೆ ಚರ್ಚಿಸಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಇದೇ ವೇಳೆ ತಿಳಿಸಿದ್ದಾರೆ.
ಕಾಡಾನೆಗಳಿಗೆ ಗುಂಡು ಹೊಡೆದು ಕೊಲ್ಲಬೇಕು ಎನ್ನುವ ಸ್ಥಳೀಯರ ಮತ್ತು ಪ್ರತಿಭಟನಾಕಾರರ ಒತ್ತಾಯದ ಕುರಿತಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ, ಆ ಹಂತಕ್ಕೆ ಯೋಚನೆ ಮಾಡುವುದು ಬೇಡ. ಇತರೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
Key words: victim –elephant- attack-woman-15 lakhs -CM -Siddaramaiah
ENGLISH SUMMARY…
Woman labourer’s death due to wild elephant attack: CM announces compensation of 15 lakhs to family of the victim
Chief Minister Siddaramaiah holds an emergency meeting with the senior officials to send the wild elephants back to the forest and avoid the menace
Moodigere November 8: Chief Minister condoled the death of Meena, a 29-year-old woman labourer who died due to the wild elephant attack this morning near Hedadalu, Moodigere in Chikkamagaluru district, and he instructed the officials to immediately issue the compensation cheque of Rs 15 lakh.
The Chief Minister held an emergency meeting with the Deputy Commissioner, SP and senior officials of the Forest Department in Mudigere.
The CM has given a clear instruction to the district administration to immediately take necessary action to send back the wild elephants to the forest.
The Chief Minister spoke to the protestors over the phone who were fighting over the dead body of Meena and said that instructions are given to take all necessary measures to avoid elephant attacks.
The Forest Minister will also arrive and hold a meeting regarding the action on the rescue measures. Wild elephants are entering coffee plantations which are adjacent to the forest area.
The Chief Minister said that he has discussed the matter with the Forest Minister to direct the task force to take necessary measures including railway fencing.
Responding to the insistence of locals and protestors that the wild elephants should be shot and killed, the Chief Minister calmed them and asked them not think to that extent and instructed the officials to take other effective measures.