ಮೈಸೂರು,ಮೇ,26,2021(www.justkannada.in): ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳಾದ ಬೆಳಗಾವಿ, ಬಳ್ಳಾರಿ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಪಂ ಅಧ್ಯಕ್ಷರು, ಪಿಡಿಓಗಳೊಂದಿಗೆ ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು.
ಕೋವಿಡ್-19 ರೂಪುರೇಷೆಗಳ ಕುರಿತು ಹಾಗೂ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಾಕವಾಗಿ ಹರಡುತ್ತಿರುವ ಸೋಂಕು ತಡೆಗಟ್ಟಲು ಮನೆಗಳನ್ನು ಸೀಲ್ಡೌನ್ ಮಾಡಿದರೆ ಉತ್ತಮ ಎಂಬ ಅಭಿಪ್ರಾಯ ಸಂವಾದದಲ್ಲಿ ಕೇಳಿ ಬಂತು. ಕೋವಿಡ್ ಹರಡುವಿಕೆ ತಡೆಗಟ್ಟುವ ಸಂಬಂಧ ಹಾಗೂ ನಿಯಮಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ಯೋಗೀಶ್ ಹಾಗೂ ಗ್ರಾ.ಪಂ ಅಧ್ಯಕ್ಷರು ಮತ್ತು ಪಿಡಿಒಗಳು ಸಂವಾದದಲ್ಲಿ ಭಾಗವಹಿಸಿದ್ದರು.
Key words: villages-best – sealdown-houses -CM -meeting – PDOs-mysore DC- Rohini sinduri