ಬೆಂಗಳೂರು,ಜನವರಿ,21,2022(www.justkannada.in): ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಬೆಂಗಳೂರಿನ ಜನತೆಗೆ ಇದೀಗ ನೀರಿನ ದರ ಹೆಚ್ಚಳದ ಬಿಸಿ ತಟ್ಟಲಿದೆ.
ಹೌದು ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ದೈನಂದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯ ಬಿಸಿಯ ನಡುವೆ ಹಾಲಿನ ದರವೂ ಏರಿಕೆಯಾಗಲಿದೆ ಎಂಬ ಸುದ್ದಿಯಾಗಿತ್ತು. ಇದೀಗ ನೀರಿನ ದರ ಹೆಚ್ಚಳ ಮಾಡಲು ಜಲಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಮೂಲಕ ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ಮತ್ತೊಮ್ಮೆ ದರ ಬೆಲೆ ಏರಿಕೆಯ ಹೊರೆ ಬೀಳುವ ಸಾಧ್ಯತೆ ಇದೆ.
8 ವರ್ಷಗಳ ಬಳಿಕ ನೀರಿನ ದರ ಪರಿಷ್ಕರಣೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಗೃಹ ಬಳಕೆಗೆ ಶೇಕಡಾ 16ರಷ್ಟು ದರ ಏರಿಕೆಗೆ ವಾಣಿಜ್ಯ ಬಳಕೆಗೆ ಶೇ.21ರಷ್ಟು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ನಿರ್ವಹಣೆ ವೆಚ್ಚ ಹೆಚ್ಚಳದ ಕಾರಣ ನೀಡಿ ಪ್ರಸ್ತಾವನೆ ಸಲ್ಲಿಸುವ ನಿರ್ಧಾರವನ್ನು ಜಲಮಂಡಳಿ ಕೈಗೊಂಡಿದೆ.
Key words: Water Board -proposes -water price -hike -Bangalore