ಬೆಂಗಳೂರು,ಏಪ್ರಿಲ್,19,2021(www.justkannada.in): ರಾಜ್ಯದಲ್ಲಿ ದಿನೇ ದಿನೇ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ಬಳಿಕ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್, ಕೊರೊನಾ ನಿಯಂತ್ರಣ ಸಂಬಂಧ ಚರ್ಚಿಸಲು ಸರ್ವಪಕ್ಷ ಸಭೆ ಕರೆಯಲಾಗಿದೆ. ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತದೆ ಎಂದರು.
ಲಾಕ್ ಡೌನ್ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಕರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. ಜನರ ಜೀವ ಕಾಪಾಡುವುದು ಸರ್ಕಾರದ ಮುಖ್ಯ ಉದ್ದೇಶ. ಜೀವ ಇದ್ದರೇ ಜೀವನ ನಡೆಸಬಹುದು. ಹೀಗಾಗಿ ಕರೋನಾ ಕಂಟ್ರೋಲ್ ಮಾಡಬೇಕಿದೆ. ಜಾಗೃತಿ ಮೂಡಿಸುವ ಸಲುವಾಗಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಸರ್ವಪಕ್ಷ ಸಭೆ ಬಳಿಕ ಟಫ್ ರೂಲ್ಸ್ ಜಾರಿ ಮಾಡಲಾಗುತ್ತದೆ ಎಂದು ಸುಧಾಕರ್ ತಿಳಿಸಿದರು.
Key words: Tough rules-after – all-party meeting-Minister -Dr. K. Sudhakar.