ದಕ್ಷಿಣ ಕನ್ನಡ,ಮೇ,11,2019(www.justkannada.in): ಟ್ರಾಫಿಕ್ ಪೊಲೀಸ್ ಬೈಕ್ ಅಡ್ಡಗಟ್ಟಿದ ಹಿನ್ನೆಲೆ ಬೈಕ್ ಗೆ ಆಟೋ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಿಸಿ ರೋಡ್ ನಲ್ಲಿ ಈ ಘಟನೆ ನಡೆದಿದೆ. ಬೈಕ್ ತಪಾಸಣೆ ವೇಳೆ ಟ್ರಾಫಿಕ್ ಪೊಲೀಸ್ ಬೈಕ್ ಅನ್ನ ಅಡ್ಡಗಟ್ಟಿದ್ದಾರೆ. ಈ ವೇಳೆ ನಿಂತಿದ್ದ ಬೈಕ್ ಗೆ ಹಿಂದೆ ಆಟೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಮತ್ತು ಆಟೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟ್ರಾಫಿಕ್ ಪೊಲೀಸರ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಮಧ್ಯೆ ಬೇಕಾಬಿಟ್ಟಿಯಾಗಿ ವಾಹನ ತಡೆಯುತ್ತಾರೆ. ಇದರಿಂದ ಅಪಘಾತಗಳು ಸಂಭವಿಸುತ್ತದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲದೆ ಟ್ರಾಫಿಕ್ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರನ್ನ ಸಾರ್ವಜನಿಕರು ತರಾಟೆ ತೆಗೆದುಕೊಂಡಿದ್ದಾರೆ.
Key words: Traffic police –bike- accident-Three – serious- injuries.