ಬೆಂಗಳೂರು,ಮೇ,12,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರೋಡ್ ಶೋ, ಪ್ರಚಾರಗಳಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಟ್ರಾಫಿಕ್ ಪೊಲೀಸರು ಶಾಕ್ ನೀಡಿದ್ದಾರೆ.
ಪ್ರಚಾರದ ಭರಾಟೆಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿ ಸುತ್ತಾಡಿದವರಿಗೆ ಟ್ರಾಫಿಕ್ ಪೊಲೀಸರು ಭಾರಿ ದಂಡ ವಿಧಿಸಿದ್ದಾರೆ. ನೀತಿ ಸಂಹಿತೆ ಜಾರಿ( ಬಳಿಕ ಅಭ್ಯರ್ಥಿಗಳು, ಕಾರ್ಯಕರ್ತರು ಬಳಸಿದ ವಾಹನಗಳಿಂದ ಸಾಲು ಸಾಲು ಟ್ರಾಫಿಕ್ ನಿಯಮಗಳ ಉಲ್ಲಂಘನೆಯಾಗಿದ್ದು ಬೆಂಗಳೂರು ನಗರದಲ್ಲಿ 25 ದಿನದಲ್ಲಿ 4.12 ಲಕ್ಷ ಪ್ರಕರಣ ದಾಖಲಾಗಿದೆ.
Key words: Traffic police – candidates- activists: 4.12 lakh- cases- registered.