ಬೆಂಗಳೂರು,ಫೆಬ್ರವರಿ,18,2021(www.justkannada.in): ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಅನ್ನದಾತರು ರೈಲು ರೋಕೋ ಚಳವಳಿ ನಡೆಸುತ್ತಿದ್ದು, ಈ ಮಧ್ಯೆ ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದ ರೈತರಿಗೆ ಪೊಲೀಸರು ತಡೆ ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಳಗಾವಿಯ ರೈಲು ನಿಲ್ದಾಣದಲ್ಲಿ ರೈತರು ರೈಲು ರೋಕೋ ಚಳವಳಿ ನಡೆಸುತ್ತಿದ್ದು ಈ ವೇಳೆ ರೈಲ್ವೆ ನಿಲ್ದಾಣದ ಒಳಗೆ ನುಗ್ಗಲು ಯತ್ನಿಸಿದರು. ಆದರೆ ಪೊಲೀಸರು ಪ್ರತಿಭಟನಾನಿರತ ರೈತರನ್ನ ತಡೆದಿದ್ದು ಈ ಸಮಯದಲ್ಲಿ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆಯಿತು.
ರೈಲ್ವೆ ನಿಲ್ದಾಣದ ಒಳಗೆ ಬಿಡುವಂತೆ ಪಟ್ಟು ಹಿಡಿದ ಪ್ರತಿಭಟನಾನಿರತ ರೈತರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ರೈತರನ್ನ ವಶಕ್ಕೆ ಪಡೆದಿದ್ದಾರೆ.
ಹಾಗೆಯೇ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಹುಬ್ಬಳ್ಳಿ ಸೇರಿ ರಾಜ್ಯಾದ್ಯಂತ ರೈತರು ರೈಲು ರೋಕೋ ಚಳವಳಿ ನಡೆಸುತ್ತಿದ್ದಾರೆ.
Key words: Train Rocco- protest-Farmers – break –belagavi- railway station – police