ಮೈಸೂರು,ಜನವರಿ,30,2021(www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವತಿಯಿಂದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ 45 ದಿನಗಳ ಕಾಲ ತರಬೇತಿ ನೀಡಲು ಮುಂದಾಗಿದೆ.
ಕರ್ನಾಟಕ ಸರ್ಕಾರ ನಡೆಸಲು ಉದ್ದೇಶಿಸಿರುವ ಕೆ-ಸೆಟ್ (ರಾಜ್ಯ ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ) (K-SET) ಹಾಗೂ ವಿಶ್ವ ವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಾಲೇಜು ಸಹಾಯಕ ಪ್ರಾಧ್ಯಾಪಕರ ಮತ್ತು ಕಿರಿದು ಶಿಷ್ಯವೇತನ ಸಂಶೋಧನಾ ಸಹಾಯಕರ ಅರ್ಹತಾ (UGC-NET) ಪರೀಕ್ಷೆಗೆ 45 ದಿನಗಳ ಕಾಲ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಆಸಕ್ತರು ದಿನಾಂಕ 10-02-2021ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 4:00 ಯೊಳಗಾಗಿ ನೋಂದಾಯಿಸಿಕೊಳ್ಳಬಹುದೆಂದು ಕರಾಮುವಿ ಕುಲಸಚಿವ ಪ್ರೊ ಲಿಂಗರಾಜ ಗಾಂಧಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 0821-2515944 ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.
Key words: Training – K-set – UGC-NET- exam- mysore-KSOU.