ಬೆಂಗಳೂರು, ಜನವರಿ,30,2024(www.justkannada.in): ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಯು.ಡಿ.ಕೃಷ್ಣಕುಮಾರ್-ಡಿವೈಎಸ್ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ACP, ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ACP, ಡಿಸಿಆರ್ ಇ, ಮೈಸೂರು ಸೇರಿದಂತೆ ಒಟ್ಟು 33 ಡಿವೈಎಸ್ಪಿ ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಾಟನ್ಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನರೇಂದ್ರ ಬಾಬು, ಸಿಸಿಬಿ ಬೆಂಗಳೂರು ಇನ್ಸ್ಪೆಕ್ಟರ್ ಕೆ.ಲಕ್ಷ್ಮೀ ನಾರಾಯಣ್, ಹಲಸೂರು ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸಂತೋಷ್ ಕೆ, ಸಂಪಂಗಿರಾಮನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿಕಿರಣ್, ರಾಮನಗರ ಕುಂಬಳಗೋಡು ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಜಿ ಹೂಗಾರ್, ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ದೀಪಕ್ ಆರ್ ಸೇರಿ ಒಟ್ಟು 132 ಇನ್ಸ್ಪೆಕ್ಟರ್ ಗಳ ವರ್ಗಾವಣೆಯಾಗಿದೆ.
Key words: Transfer – 33 DYSP- 132 Inspectors-Govt.