ಮೈಸೂರು,ಫೆಬ್ರವರಿ,13,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಅವರನ್ನ ವರ್ಗಾವಣೆ ಮಾಡಲಾಗಿದೆ.
ರಾಜ್ಯ ಸರ್ಕಾರ ಇಂದು 42 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದ್ದು ಈ ವೇಳೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಅವರನ್ನ ವರ್ಗಾವಣೆಗೊಳಿಸಲಾಗಿದೆ. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಗುರುದತ್ತ ಹೆಗಡೆ ಅವರನ್ನ ನೇಮಕ ಮಾಡಲಾಗಿದೆ.

ಇನ್ನು ಆಡಳಿತ ತರಬೇತಿ ವಿಭಾಗದ ಜಂಟಿ ನಿರ್ದೇಶಕ ಹುದ್ದೆಗೆ ಜ್ಞಾನೇಂದ್ರ ಕುಮಾರ್ ಗಂಗವಾರ್ ಅವರನ್ನ ನೇಮಕ ಮಾಡಲಾಗಿದೆ. ಜ್ಞಾನೇಂದ್ರ ಕುಮಾರ್ ಅವರು ಬೀದರ್ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದರು. ಹಾಗೆಯೇ ATI ಆಡಳಿತ ವಿಭಾಗದ ನಿರ್ದೇಶಕರಾಗಿ ಕರಿಗೌಡ ಅವರನ್ನ ನೇಮಕ ಮಾಡಲಾಗಿದೆ.
Key words: Transfer – Mysore City corporation –Commissioner- Gurudutt hegde