ಬೆಂಗಳೂರು,ಡಿಸೆಂಬರ್,12,2020(www.justkannada.in): ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ರಾಜ್ಯ ಸರ್ಕಾರ ಮಣಿಯದ ಹಿನ್ನೆಲೆ ನಾಳೆಯಿಂದ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನ ಮಾಡಲಾಗಿದೆ.
ನಾಳೆಯಿಂದ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ. ಇಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಹಳ್ಳಿ ಚಂದ್ರ ಶೇಖರ್ ನೇತೃತ್ವದ ಸಭೆಯಲ್ಲಿ ತೀರ್ಮಾನ ಮಾಡಿಲಾಗಿದೆ. ನಾಳೆಯಿಂದ ಮುಷ್ಕರ ತೀವ್ರಗೊಳಿಸಲು ಸಾರಿಗೆ ನೌಕರರು ನಿರ್ಧರಿಸಿದ್ದು ಎಲ್ಲಾ ಡಿಪೋಗಳಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ. ಈ ಮೂಲಕ ಸಾರಿಗೆ ನೌಕರರು, ಸರ್ಕಾರಕ್ಕೆ ಮತ್ತಷ್ಟು ಒತ್ತಡವನ್ನು, ಬಿಸಿಯನ್ನು ಮುಟ್ಟಿಸಲಿದ್ದಾರೆ.
ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ನಮ್ಮ ಸಾರಿಗೆ ನೌಕರರು ಶಾಂತಿಯುತ ಧರಣಿ ನಡಸುತ್ತಿದ್ದಾರೆ. ಸಾರಿಗೆ ಸಿಬ್ಬಂದಿ ಯಾರೂ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿಲ್ಲ. ನಾಳೆ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ. ಸಿಎಂ ಮಾಡಿರುವ ಆರೋಪ ಮುಕ್ತರಾಗಬೇಕು ಎಂದರು.
Key words: Transport- employees – decide – hunger strike -tomorrow