ಬೆಂಗಳೂರು,ಡಿಸೆಂಬರ್,10,2020(www.justkannada.in): ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾನಿರತ ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದರು.
ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವುದು ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಇಂದು ವಿಧಾನಸೌಧಕ್ಕೆ ಕಾಲ್ನಡಿಗೆ ಜಾಥ ಹಮ್ಮಿಕೊಂಡಿದ್ದರು. ಈ ಮಧ್ಯೆ ಬೆಳಿಗ್ಗೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಿದ್ದ ಸಾರಿಗೆ ನೌಕರರ ಜಾಥ ಫ್ರೀಡಂ ಪಾರ್ಕ್ ತಲುಪಿ ಪ್ರತಿಭಟನೆ ನಡೆಸಲಾಗುತ್ತಿತ್ತು.
ಸಾರಿಗೆ ನೌಕರರ ಪ್ರತಿಭಟನೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಸಹ ಬೆಂಬಲ ನೀಡಿದ್ದರು. ಈ ನಡುವೆ ಪ್ರತಿಭಟನಾನಿರತ ಸಾರಿಗೆ ನೌಕರರು ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ತೆರಳುವಾಗ ಫ್ರೀಡಂ ಪಾರ್ಕ್ ಬಳಿ ಪೊಲೀಸರು ಸಾರಿಗೆ ನೌಕರರನ್ನ ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಕರೆದೊಯ್ದಿದ್ದಾರೆ.
Key words: Transport workers –protest-detained -police – besiege -vidhanasoudha