ಮೈಸೂರು,ನವೆಂಬರ್,16,2021(www.justkannada.in): ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ದೇವಸ್ಥಾನ ಆವರಣದಲ್ಲಿ ತುಳಸಿ ಪೂಜೆ (ವಿವಾಹ) ಕಾರ್ಯಕ್ರಮ ಮಂಗಳವಾರ ಸಂಭ್ರಮದಿಂದ ಜರುಗಿತು.
ತುಳಸಿ ಕಟ್ಟೆ ಶುಚಿಗೊಳಿಸಿ ಬಣ್ಣ ಹಚ್ಚಲಾಯಿತು. ಕಬ್ಬು ಮಾವಿನ ತಳಿರು -ತೋರಣ ಹಾಗೂ ಹೂ ದಂಡೆ ,ಮಾಲೆಗಳೊಂದಿಗೆ ವಿಶೇಷ ಅಲಂಕಾರ ಪೂಜೆ ಮಾಡಲಾಯಿತು ,ಆನಂತರ ಸಾರ್ವಜನಿಕರಿಗೆ ತುಳಸಿ ಗಿಡವನ್ನು ವಿತರಿಸಿ ತುಳಸಿ ಮಹತ್ವಗಳನ್ನು ತಿಳಿಸಲಾಯಿತು.
ಮೈಸೂರು ಜಿಲ್ಲಾ ಅರ್ಚಕರ ಸಂಘದ ಅಧ್ಯಕ್ಷರದ ಎಸ್ ಕೃಷ್ಣಮೂರ್ತಿ ಮಾತನಾಡಿ ಹಿಂದೂಗಳಿಗೆ ತುಳಸಿ ಗಿಡ ಎಂದರೆ ಅತ್ಯಂತ ಪವಿತ್ರವಾದ ಗಿಡವಾಗಿದ್ದು, ತುಳಸಿ ಗಿಡಕ್ಕೆ ತನ್ನದೇ ಆದ ವೈಶಿಷ್ಟ್ಯತೆ ಹೊಂದಿದೆ. ಶ್ರೀಕೃಷ್ಣನ ಕಾಲದಿಂದಲೂ ತುಳಸಿಗೆ ಎಲ್ಲಾ ಗಿಡಕ್ಕಿಂತ ಶ್ರೇಷ್ಠವಾದ ಸ್ಥಾನವನ್ನು ನೀಡಲಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶ ಪ್ರತಿಯೊಂದರಲ್ಲೂ ವಿಭಿನ್ನತೆಯನ್ನು ಹೊಂದಿದೆ ಎಂದರು.
ನಮ್ಮ ಸಂಸ್ಕೃತಿ ಸಂಪ್ರದಾಯ ಶ್ರೀಮಂತಿಕೆಯನ್ನು ಹೊಂದಿದ್ದು ನಾವು ಆಚರಣೆ ಮಾಡುವ ಪ್ರತಿಯೊಂದು ಹಬ್ಬ ಹರಿದಿನಗಳು ವಿಭಿನ್ನತೆಯೊಂದಿಗೆ ವಿಶೇಷತೆ ಯನ್ನು ಹೊಂದಿದೆ. ಇದಕ್ಕೆ ತುಳಸಿ ಮದುವೆ ಕೂಡ ಪ್ರಮುಖ ತುಳಸಿ ಮದುವೆ ಹಿಂದೂಗಳ ಧಾರ್ಮಿಕ ಆಚರಣೆಗಳಲ್ಲಿ ಇದು ಕೂಡ ಒಂದು.,ಪ್ರತಿವರ್ಷ ತುಳಸಿ ವಿವಾಹವನ್ನು ಕಾರ್ತಿಕ ತಿಂಗಳ ಶುಕ್ಲ ಪಕ್ಷದ ಏಕಾದಶಿ ದಿನದಂದು ನೆರವೇರಿಸಲಾಗುತ್ತದೆ ಎಂದರು.
ನಂತರ ಮಾತನಾಡಿದ ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್ ತುಳಸಿ ಗಿಡವು ಹಿಂದೂ ಧರ್ಮದಲ್ಲಿನ ಜನರಿಗೆ ಅವಿಭಾಜ್ಯ ಅಂಗ ಮತ್ತು ಇದನ್ನು ಮನೆಯಲ್ಲಿ ಬೆಳೆಸಿ ಬಳಸಿದರೆ ವಿವಿಧ ಕಾಯಿಲೆಗಳು ಬರುವುದಿಲ್ಲ ಹಾಗೇ ತುಳಸಿಗಿಡವು ಯಥೇಚ್ಛವಾಗಿ ಆಮ್ಲಜನಕವನ್ನು ಉತ್ಪತ್ತಿ ಮಾಡುತ್ತದೆ. ಆದ್ದರಿಂದ ಅಂದಿನ ದಿನಗಳಲ್ಲಿ ರಾಯರು ಸಹ ತುಳಸಿಗಿಡದ ಮಹತ್ವವನ್ನು ಜಗಕ್ಕೆ ಸಾರಿದ್ದರು. ಆದ್ದರಿಂದಲೇ ಅವರು ಬೃಂದಾವನದಲ್ಲಿ ಲೀನವಾದರು ಎಂದು ರಾಯರನ್ನು ಸ್ಮರಿಸಿದರು. ತುಳಸಿ ಗಿಡದ ಎಲೆಗಳನ್ನು ಬಳಸಿದರೆ ಡೆಂಗ್ಯೂ ಕಾಯಿಲೆಯೂ ವಾಸಿಯಾಗುತ್ತದೆ ಎಂದು ಹೇಳಿದರು.
ಅರ್ಚಕರು ಮತ್ತು ಆಗಮಿಕರ ಹಾಗೂ ಮೈಸೂರು ಜಿಲ್ಲಾ ಅರ್ಚಕರ ಸಂಘದ ಅಧ್ಯಕ್ಷರದಎಸ್ ಕೃಷ್ಣಮೂರ್ತಿ, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್ ,ಕೃಷ್ಣಪ್ಪ ,ದಾಶರಥಿ ,ಲಕ್ಷ್ಮಿ ,ಪದ್ಮಮ್ಮ ,ಬಾಲಸುಬ್ರಹ್ಮಣ್ಯ ,ಹಾಗೂ ಇನ್ನಿತರರು ಹಾಜರಿದ್ದರು.
Key words: Tulsi worship -Panchamukhi Anjaneya Temple-mysore