ತುಮಕೂರು,ನವೆಂಬರ್,9,2022(www.justkannada.in): ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಮತ್ತು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾಗಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.
ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ,, ಪರಿಶೀಲನೆ ನಡೆಸಿ ನಂತರ ಸಿಬ್ಬಂದಿ , ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹಿಳೆ ಮತ್ತು ಮಕ್ಕಳ ಸಾವಿನ ಬಗ್ಗೆ ಸಭೆ ನಡೆಸಿದ್ದೇನೆ. ಸರಿಯಾಗಿ ಕೆಲಸ ಮಾಡುವಂತೆ ಎಚ್ಚರಿಕೆ ನೀಡಿದ್ದೇನೆ. ಔಷಧ ಚೀಟಿಯನ್ನ ಹೊರಗೆ ಬರೆದುಕೊಡಬಾರದು. ಆಸ್ಪತ್ರೆಯೊಳಗೆ ನೀಡಬೇಕು ಎಂದು ಸೂಚಿಸಿದ್ದೇನೆ.
ತಾಯಿ ಅವಳಿ ಮಕ್ಕಳ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯಾಗುತ್ತಿದೆ. ತನಿಖೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಆಸ್ಪತ್ರೆಯ ಕೊರತೆಗಳನ್ನ ಸರಿಪಡಿಸುತ್ತೇವೆ ಎಂದು ಸಚಿವ ಅರಗ ಜ್ಞಾನೇಂದ್ರ ನುಡಿದರು.
Key words: tumkur-district-Hospital-home minister-Araga jnanedra