ತುಮಕೂರು,ನವೆಂಬರ್,26,2020(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದು ಈ ಮಧ್ಯೆ ಸಚಿವಾಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಹೀಗಾಗಿ ಹಾಲಿ ಸಚಿವರಿಗೆ ಕೊಕ್ ನೀಡಿ ಹೊಸಬರಿಗೆ ಅವಕಾಶ ನೀಡುವ ಕುರಿತು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದು ಇನ್ನು ಸಚಿವೆ ಶಶಿಕಲಾ ಜೊಲ್ಲೆ ಅವರ ಹೆಸರು ಕೇಳಿ ಬಂದಿದೆ.
ಹೀಗಾಗಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ತುಮಕೂರಿನಲ್ಲಿ ಗುರುವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ‘ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ? ನಾನೊಬ್ಬಳೇ ಮಹಿಳಾ ಮಂತ್ರಿ ಇರೋದು.. ನನ್ನ ಕೆಲಸವನ್ನ ನಾನು ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ.ಆದರೂ ಯಾಕೆ ನನ್ನನ್ನೇ ಟಾರ್ಗೆಟ್ ಮಾಡ್ತಿದ್ದಾರೋ ಗೊತ್ತಿಲ್ಲ ಎಂದರು.
ರಾಜ್ಯ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಕೆಲಸ ಮಾಡಿದ್ದೇನೆ. ‘ಸಚಿವ ಸ್ಥಾನ ತ್ಯಾಗದ ಬಗ್ಗೆ ರಾಜ್ಯ ಅಥವಾ ರಾಷ್ಟ್ರದ ನಾಯಕರಿಂದ ಸೂಚನೆ ಬಂದಿಲ್ಲ. ವರಿಷ್ಠರಿಂದ ಒತ್ತಡ ಬಂದರೆ ಹೈಕಮಾಂಡ್ ನಿಂದ ಸೂಚನೆ ಬಂದರೆ ಅವರ ಸೂಚನೆಗೆ ಬದ್ಧ. ಸಚಿವ ಸ್ಥಾನ ಕೈ ತಪ್ಪುತ್ತೆ ಎಂಬುದೆಲ್ಲ ಊಹಾಪೂಹಾ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
Key words: tumkur- Minister -Sasikala Jolle-ministrial position