ತುಮಕೂರು,ಡಿ, 16,2019(www.justkannada.in): ತಾಲಿಬಾನಿಗಳಿಗೆ ಕಾಂಗ್ರೆಸ್ ಸಹಕಾರ ನೀಡುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಪಿತೂರಿ ಮಾಡುತ್ತಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಗಂಭೀರ ಆರೋಪ ಮಾಡಿದರು.
ತುಮಕೂರಿನಲ್ಲಿ ಇಂದು ಮಾತನಾಡಿದ ಸಚಿವ ಸಿ.ಟಿ ರವಿ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟರು ಸೇರಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಪಿತೂರಿ ಮಾಡುತ್ತಿದ್ದಾರೆ. ತಾಲಿಬಾನಿಗಳಿಗೆ ಸಹಕಾರ ನೀಡಲು ಮುಂದಾಗಿದ್ದಾರೆ. ಮತೀಯ ಆಧಾರದಲ್ಲಿ ದೇಶ ವಿಭಜನೆ ಮಾಡಿದ ಪಾಪದ ಕೂಸಿನ ಪರಿಣಾಮ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಪಾಕ್ ಬಾಂಗ್ಲಾದೇಶದಲ್ಲಿ ಹಿಂದೂ,ಸಿಕ್, ಬೌಧ್ದರು ಅಲ್ಪಸಂಖ್ಯಾತರು. ಹೀಗಾಗಿ ಅವರಿಗೆ ಪೌರತ್ವ ಕೊಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಸಿ.ಟಿ ರವಿ, ನಾನು ಸಚಿವ ಸ್ಥಾನ ಕೇಳಿರಲಿಲ್ಲ. ಆದರೂ ಹೈಕಮಾಂಡ್ ಸಚಿವ ಸ್ಥಾನ ನೀಡಿದೆ. ನಮಗೆ ಸಚಿವ ಸ್ಥಾನಕ್ಕಿಂತ ಪಕ್ಷ ದೊಡ್ಡದು. ಹೀಗಾಗಿ ಹೈಕಮಾಂಡ್ ನಾಳೆಯೇ ಸಚಿವ ಸ್ಥಾನದಿಂದ ಕೆಳಗಿಳಿಯುವಂತೆ ಸೂಚಿಸಿದರೇ ಇಳಿಯುತ್ತೇನೆ. ಎಲ್ಲರೂ ಪಕ್ಷದ ಸುಗ್ರಿವಾಜ್ಞೆಯನ್ನ ಪಾಲಿಸಬೇಕು ಎಂದು ತಿಳಿಸಿದರು.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ಎಷ್ಟು ಡಿಸಿಎಂ ಸ್ಥಾನ ಸೃಷ್ಠಿಸಬೇಕೆಂಬುದು ಸಿಎಂ ವಿವೇಚನೆಗೆ ಬಿಟ್ಟಿದ್ದು . ನಾನು ಡಿಸಿಎಂ ಹುದ್ದೆ ಆಕಾಂಕ್ಷಿಯಲ್ಲ. ಕೆಲ ನಾಯಕರ ಬೆಂಬಲಿಗರು ತಮ್ಮ ನಾಯಕನಿಗೆ ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಡುವುದು ತಪ್ಪಲ್ಲ ಎಂದು ಸಚಿವ ಸಿಟಿ ರವಿ ತಿಳಿಸಿದರು.
key words: tumkur-minsiter- CT ravi-congress- support-talibani