ಸಿಎಂ ಮುಂದೆ ಶರಣಾಗಿದ್ದ ಇಬ್ಬರು ನಕ್ಸಲರು ಪೊಲೀಸ್ ಕಸ್ಟಡಿಗೆ

ಶಿವಮೊಗ್ಗ,ಫೆಬ್ರವರಿ,10,2025 (www.justkannada.in):  ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಿದ್ದ ಆರು ನಕ್ಸಲರ ಪೈಕಿ ಮುಂಡಗಾರು ಲತಾ ಮತ್ತು ವನಜಾಕ್ಷಿ ಇಬ್ಬರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.

ಇಂದು ಪೊಲೀಸರು ತೀರ್ಥಹಳ್ಳಿ ಜೆಎಂಎಫ್ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರಾದ ಗೀತಾಮಣಿ ಅವರು ಇಬ್ಬರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಮುಂಡಗಾರು ಲತಾ ಮತ್ತು ವನಜಾಕ್ಷಿ ವಿರುದ್ದ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರಕರಣ ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

Key words: Two Naxalites, police custody