ನವದೆಹಲಿ,ಫೆಬ್ರವರಿ,13,2023(www.justkannada.in): ಸುಪ್ರೀಂಕೋರ್ಟ್ಗೆ ನೂತನ ನ್ಯಾಯಮೂರ್ತಿಗಳಾಗಿ ಕರ್ನಾಟಕ ಮೂಲದ ನ್ಯಾ. ಅರವಿಂದ್ ಕುಮಾರ್ ಮತ್ತು ನ್ಯಾ.ರಾಜೇಶ್ ಬಿಂದಲ್ ಪ್ರಮಾಣ ವಚನ ಸ್ವೀಕರಿಸಿದರು.
ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಇಂದು ಇಬ್ಬರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದರು. ಈ ಇಬ್ಬರ ನೇಮಕದೊಂದಿಗೆ ಸುಪ್ರೀಂಕೋರ್ಟ್ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 34 ಆಗಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಪೂರ್ಣಪ್ರಮಾಣದಲ್ಲಿ ಜಡ್ಜ್ಗಳ ನೇಮಕವಾದಂತಾಗಿದೆ.
ಸುಪ್ರೀಂಕೋರ್ಟ್ ನ ಕೊಲೆಜಿಯಂ ಜನವರಿ 31ರಂದು ನ್ಯಾ. ರಾಜೇಶ್ ಬಿಂದಲ್ ಮತ್ತು ನ್ಯಾ. ಅರವಿಂದ್ ಕುಮಾರ್ ಅವರನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಬಡ್ತಿ ನೀಡಲು ಶಿಫಾರಸು ಮಾಡಿತ್ತು. ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗುವ ಮೊದಲು ನ್ಯಾ. ಅರವಿಂದ್ ಕುಮಾರ್ ಅವರು ಗುಜರಾತ್ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿಯಾಗಿ ಕೆಲಸ ಮಾಡುತ್ತಿದ್ದರು. ನ್ಯಾ. ರಾಜೇಶ್ ಬಿಂದಲ್ ಅವರು ಅಲಹಾಬಾದ್ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಾಗಿದ್ದರು.
Key words: two- new justices – Supreme Court- oath.